ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 5, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಟಲರ್ಜಿಕಲ್ ಮತ್ತು ಮೆಟೀರಿಯಲ್ಸ್ ಇಂಜಿನಿಯರಿಂಗ್/ಮೆಟೀರಿಯಲ್ಸ್ ಇಂಜಿನಿಯರಿಂಗ್/ಮೆಟಲರ್ಜಿಕಲ್ ಇಂಜಿನಿಯರಿಂಗ್/ ನ್ಯಾನೊಟೆಕ್ನಾಲಜಿ/ಕೆಮಿಕಲ್ ಇಂಜಿನಿಯರಿಂಗ್/ಪಾಲಿಮರ್ ಸೈನ್ಸ್ & ಟೆಕ್ನಾಲಜಿ/ಬಯೋಟೆಕ್ನಾಲಜಿಯಲ್ಲಿ M.E ಅಥವಾ M.Tech, ರಸಾಯನಶಾಸ್ತ್ರ/ಭೌತಶಾಸ್ತ್ರ/ಪ್ರಾಣಿಶಾಸ್ತ್ರದಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಸುರತ್ಕಲ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.