ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ

ಸಮಗ್ರ ನ್ಯೂಸ್: ಹಿಂದುಳಿದವರಿಗೆ, ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಾರಂಭಿಸಿದ್ದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅಮಿತ್ ಶಾ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಹೇಳಿದ್ದಕ್ಕೆ ಮರು ಮಾತನಾಡದೆ ನಿಲ್ಲಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಹೀಗೆ ಹೇಳುವ ಮೂಲಕ ಕೆಎಸ್ ಈಶ್ವರಪ್ಪ ಅವರು ಮತ್ತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭಿಸುವ ಸುಳಿವು ನೀಡಿದ್ದಾರೆ.

Ad Widget ... ..

ಹಿಂದುಳಿದವರು ಮತ್ತು ದಲಿತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸುತ್ತೇನೆ. ಬಿಜೆಪಿ ನನ್ನ ಮಾತೃ ಸಂಸ್ಥೆ. ಈ ಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಮರಳುತ್ತೇನೆ. ದಿನದಿಂದ ದಿನಕ್ಕೆ ಬೆಂಬಲ ಹೆಚ್ಚುತ್ತಿದೆ. ಜನರು ಹೆಚ್ಚು ಬೆಂಬಲಿಸುತ್ತಾರೆ ಎಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Leave a Comment

Your email address will not be published. Required fields are marked *