ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!?

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಕೆಎಸ್ ಈಶ್ವರಪ್ಪ ಅವರ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.

Ad Widget ... ..

ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

Ad Widget

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಯತ್ನ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಕಾಂತೇಶ್​ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.

Leave a Comment

Your email address will not be published. Required fields are marked *