ಹುಬ್ಬಳ್ಳಿ: ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು

ಸಮಗ್ರ ನ್ಯೂಸ್‌ : ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.

Ad Widget ... ..

ನಂತರ ಅವರಿಂದ ಪಾದಪೂಜೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಶ್ರೀಗಳು, ನೇಹಾ ಹಿರೇಮಠ ಹತ್ಯೆ ಖಂಡನೀಯ. ಇಂತಹ ನೀಚ ಕೃತ್ಯ ಮಾಡಿದವನಿಗೆ ತಕ್ಕ ಶಿಕ್ಷೆ ನೀಡಬೇಕು.

Ad Widget

ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದೆ. ಆದರೆ, ಸಿಐಡಿ ಸಂಸ್ಥೆಯು ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯ ಮಾಡಿದರು.

Leave a Comment

Your email address will not be published. Required fields are marked *