ಲಕ್ನೋ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ರಾಯ್‌ ಬರೇಲಿಯಿಂದ ಸ್ಪರ್ಧೆ ಮಾಡಲಿದ್ದು, ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಲಾಗಿದೆ.

Ad Widget ... ..

ಐದನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಇದೀಗ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

Ad Widget

ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಸೋಲಿಸಿದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ರಾಯ್ ಬರೇಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಎರಡು ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸದಸ್ಯರಾದ ನಂತರ ರಾಯ್ ಬರೇಲಿ ಸ್ಥಾನವನ್ನು ತೆರವು ಮಾಡಲಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡಿನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

Leave a Comment

Your email address will not be published. Required fields are marked *