ಬಾಗಲಕೋಟೆ: ʼಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆʼ

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ ಮಾಡೋ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

Ad Widget ... ..

ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಸ್ ಪೋರ್ಟ್ ರದ್ಧತಿಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೂ ಕೇಂದ್ರ ಸರ್ಕಾರ ಏನು ಮಾಡುತ್ತಿಲ್ಲ. ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ ಎಂದು ಹೇಳಿದ್ದಾರೆ.

Ad Widget

ಕುಮಾರಸ್ವಾಮಿ ಪ್ರಜ್ವಲ್ ನನ್ನ ಮಗ ಅನ್ನುತ್ತಿದ್ದರು, ಈಗ ಏನು ಹೇಳ್ತಾರೆ?. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು, ಈಗ ಕ್ರಮ ಯಾಕೆ ವಹಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

Leave a Comment

Your email address will not be published. Required fields are marked *