ಮೂರು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಪಾಪಿ- ಆರೋಪಿ ಅಂದರ್

ಬೆಳಗಾವಿ: ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂದಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬೆಳಗಾವಿಯ ಕ್ಯಾಂಪ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಮುಂಬೈ ಮೂಲದ ಯುವಕ ಸೇರಿದಂತೆ ಇಬ್ಬರ ಬಂಧನವಾಗಿದೆ. ಒಂದು ವಾರದ ಹಿಂದೆ ಬೆಳಗಾವಿಯಲ್ಲಿ ದುಷ್ಕೃತ್ಯ ನಡೆದಿತ್ತು ಎಂದು ತಿಳಿದುಬಂದಿದೆ. ವಾರದ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದ ಯುವಕ, ನೆರೆಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಕೇಳಿಬಂದಿದೆ. ಆದರೆ, ಮರ್ಯಾದೆಗೆ ಹೆದರಿ ಮಗು ಪೋಷಕರು ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಘಟನೆ ಬಳಿಕ ಸಂತ್ರಸ್ತ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ, ಸಂಬಂಧಿಕರಿಗೆ ಮಾಹಿತಿ ತಿಳಿದು ಆರೋಪಿಗಳಿಗೆ ಧರ್ಮದೇಟು ಕೊಡಲಾಗಿದೆ. ಆರೋಪಿಗಳನ್ನು ಹಿಗ್ಗಾಮುಗ್ಗಾ ಥಳಿಸಿ ಸಂಬಂಧಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

Leave a Comment

Your email address will not be published. Required fields are marked *