ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಭಾರತೀಯ ನೌಕಾದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ನೌಕಾದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ನವೆಂಬರ್ 1, 2003 ರಿಂದ ಏಪ್ರಿಲ್ 30, 2007ರೊಳಗೆ ಜನಿಸಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 30,000
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 550 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ವಿಧಾನ- ಆನ್ಲೈನ್
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಫಿಜಿಕಲ್ ಫಿಟ್ನೆಸ್ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://agniveernavy.cdac.inApply here