ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದಿದೆ.

Ad Widget ... ..

ಇದು ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ನಡೆದ ಘಟನೆಯಾಗಿದೆ. ಊಟದ ನಂತರ ಐಸ್ ಕ್ರೀಂ ತಿಂದಿದ್ದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Ad Widget

ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದಕ್ಕೆ ಈ ರೀತಿಯಾಗಿದೆ ಎನ್ನಲಾಗಿದೆ. ಇನ್ನೂ ಅಸ್ವಸ್ಥರಿಗೆ ಡ್ರಿಪ್ಸ್ ಹಾಕಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Leave a Comment

Your email address will not be published. Required fields are marked *