Ad Widget .

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ದಕ್ಷಿಣ ಬ್ರೆಜಿಲ್ ನಲ್ಲಿ ಭಾರೀ ಮಳೆಗೆ ಉಂಟಾಗಿರುವ ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‍ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

Ad Widget . Ad Widget .

3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *