ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆಯಿದೆ. ಮೇ 6 ರಿಂದ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿಯಲಿದೆ.
ಇನ್ನು ಮೇ 10 ರವರೆಗೆ ರಾಜ್ಯದಲ್ಲಿ ಸತತವಾಗಿ ಮಳೆ ಸುರಿಯುವ ಸಾಧ್ಯತೆಯಿದ್ದು, ಹಳೇ ಮೈಸೂರು ಭಾಗದಲ್ಲಿ ಭಾರಿ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 7 ರಂದು ಬಿಸಿಗಾಳಿ ಅಲೆಯ ಜೊತೆಗೆ ಆಲಿಕಲ್ಲು ಮಳೆ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ, ಬೆಂಗಳೂರಿನಲ್ಲಿಯೂ ಇಂದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.