ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ

Ad Widget ... ..

ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ ಅಪಹರಣ ಕೇಸ್‌ನಲ್ಲಿ ನೇರವಾಗಿ ಭವಾನಿ ರೇವಣ್ಣ ಅವರ ವಿರುದ್ಧ ಆರೋಪ ಮಾಡಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿಯೇ ಅಪಹರಣ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣ ಅವರಿಗೆ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.

Ad Widget

Leave a Comment

Your email address will not be published. Required fields are marked *