ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..!

ಸಮಗ್ರ ನ್ಯೂಸ್; ಬೆಂಗಳೂರಿನಲ್ಲಿ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget ... ..

ಭೀಕರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಕಾರ್ತಿಗೇಯನ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

ಕೊಲೆಯಾದ ಕಾರ್ತಿಗೇಯನ್ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ಆಗಿ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ರಾತ್ರಿ ದುಷ್ಕರ್ಮಿಗಳು ನಡು ರಸ್ತೆಯಲ್ಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

Leave a Comment

Your email address will not be published. Required fields are marked *