ಸಮಗ್ರ ಉದ್ಯೋಗ: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2025 ಕನಿಷ್ಠ 20 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ಲಿಸ್ಟಿಂಗ್
ಮೆಡಿಕಲ್ ಪರೀಕ್ಷೆ
ಸಂದರ್ಶನ
ವೇತನ:
ತರಬೇತಿ ಸಮಯದಲ್ಲಿ ನಿಗದಿತ ಸ್ಟೈಪೆಂಡ್: ರೂ.56100/- ಪ್ರತಿ ತಿಂಗಳು
ಶ್ರೇಣಿಯ ವೇತನ (ತಿಂಗಳಿಗೆ)
ಲೆಫ್ಟಿನೆಂಟ್- ಮಾಸಿಕ ₹ 56100-177500
ಕ್ಯಾಪ್ಟನ್- ಮಾಸಿಕ ₹ 61300-193900
ಮೇಜರ್ – ಮಾಸಿಕ ₹69400-207200
ಲೆಫ್ಟಿನೆಂಟ್ ಕರ್ನಲ್ ಮಾಸಿಕ ₹121200-212400
ಕರ್ನಲ್- ಮಾಸಿಕ ₹130600-215900
ಬ್ರಿಗೇಡಿಯರ್- ಮಾಸಿಕ ₹ 139600-217600
ಮೇಜರ್ ಜನರಲ್ – ಮಾಸಿಕ ₹ 1,44,200-2,18,200
ಲೆಫ್ಟಿನೆಂಟ್ ಜನರಲ್ HAG ಸ್ಕೇಲ್- ಮಾಸಿಕ ₹ 182200-224100
ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್ – ಮಾಸಿಕ ₹ 205400-224400
VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ (NFSG)- ಮಾಸಿಕ ₹225000/-
COAS -ಮಾಸಿಕ ₹ 250000/-
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.