ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

Ad Widget ... ..

ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು.

Ad Widget

ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದನು. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಸ್ಥಳೀಯರು ಹಳ್ಳದಲ್ಲಿ ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಪ್ರಕರಣ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *