ಸಮಗ್ರ ನ್ಯೂಸ್: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೋಮವಾರ(ಮೇ.13) ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್‌ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ ನಾವು ಕಾಲಾವಕಾಶ ನೀಡಿಲ್ಲ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ ಎಂಬುದಾಗಿ ಸ್ಪಷ್ಟ ಪಡಿಸಿತು.
ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಪ್ರಕರಣ ದಾಖಲಾದ ನಂತ್ರ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ಮಹಿಳೆಯ ಸುರಕ್ಷತೆಯಿಂದ ಜಾಮೀನು ನಿರಾಕರಿಸಲಾಗಿತ್ತು. ಆ ಬಳಿಕ ಅಂದೇ ಅವರು ಪತ್ತೆಯಾಗಿದ್ದರು. ಏಪ್ರಿಲ್.28ರಂದು ಹೊಳೇನರಸೀಪುರದಲ್ಲಿ ಮೊದಲ ಕೇಸ್ ದಾಖಲಾಗಿತ್ತು. ಮೇ.2ರಂದು ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು ಎಂಬುದಾಗಿ ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದಿಸಿದರು.
ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಸೋಮವಾರ ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಮೂರು ದಿನ ಜೈಲೇ ಗತಿಯಾಗಿದೆ.