Ad Widget .

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ.

Ad Widget . Ad Widget . Ad Widget .

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ.

ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎಂಬ ಮಾಹಿತಿ ತಿಳಿದು ಬಂದಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *