ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

Ad Widget ... ..

ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶಿವಕಾಶಿಯಿಂದ ಪಟಾಕಿ, ಸುರಕ್ಷತಾ ಬೆಂಕಿಕಡ್ಡಿ, ಸ್ಟೇಷನರಿ ವಸ್ತುಗಳು ಇಡೀ ದೇಶಕ್ಕೆ ಸಪ್ಲೈ ಮಾಡಲಾಗುತ್ತದೆ. ಆದರೆ ಬಿಸಿಲು ಹೆಚ್ಚಿರುವ ಸಮಯದಲ್ಲಿ ತಯಾರಿಗೆಯನ್ನು ಸ್ವಲ್ಪ ಕಡಿಮೆ ಮಾಡಿ ಜನರ ಜೀವ ಉಳಿಸಬೇಕು ಎಂಬು ಮೃತ ಕುಟುಂಬಸ್ಥರ ಆಕ್ರಂದನವಾಗಿದೆ.

Leave a Comment

Your email address will not be published. Required fields are marked *