ಉಡುಪಿ: ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಾಟ

ಸಮಗ್ರ ನ್ಯೂಸ್‌ : ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

Ad Widget ... ..

ಸ್ವಿಫ್ಟ್ ಡಿಝರ್ ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಿಸಲಾಗುತ್ತಿದ್ದು, ಶಿರೂರು ಟೋಲ್ ಗೇಟ್ ಬಳಿ ಪತ್ತೆಯಾಗಿದೆ. ಮೊದಲು ಇದನ್ನು ಗಮನಿಸಿದ ಆಂಬುಲೆನ್ಸ್‌ ಡ್ರೈವರ್ ಒಬ್ಬರು ಈ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget

ಈ ಬಗ್ಗೆ ವಿಚಾರಿಸಿದ್ದಕ್ಕೆ ಕಾರ್‌ನಲ್ಲಿದ್ದ ಮೃತದೇಹದ ವಾರಸುದಾರರು, ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮೃತದೇಹವನ್ನು ಉಡುಪಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಡೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಎರಡು ದಿನಗಳ ಹಿಂದೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Leave a Comment

Your email address will not be published. Required fields are marked *