ಪೆನ್ ಡ್ರೈವ್ ಪ್ರಕರಣ: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಕಚೇರಿಯ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Ad Widget ... ..

ಈ ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದೇ ವಿಚಾರವಾಗಿ ಎಸ್​ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಇದೀಗ ಅಧಿಕಾರಿಗಳು ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್​ ಹಾಗೂ ಆಪ್ತ ಲಿಖಿತ್​ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ. ಲಿಖಿತ್ ಮತ್ತು ಚೇತನ್​ ಪ್ರೀತಂಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಎಸ್​ಐಟಿ ಅಧಿಕಾರಿಗಳು ಸದ್ಯ ಹಾಸನ ನಗರ ಪೊಲೀಸ್​ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಇದರ ಹಿಂದೆ ಯಾರು ಯಾರು ಇದ್ದಾರೆ ಎಂದು ಮಾಹಿತಿ ಸಂಗ್ರಹಿಸುತ್ತಿದೆ.

Ad Widget

ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

Leave a Comment

Your email address will not be published. Required fields are marked *