ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಗಾಗೆ ಹುಸಿಬಾಂಬ್ ಬೆದರಿಕೆ ಕರೆಗಳು ಬರುವುದು ಸಾಮಾನ್ಯ. ಅದರಂತೆ ಇಂದು ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೂ ಬಾಂಬ್ ಬೆದರಿಕೆ ಬಗ್ಗೆ ಇ ಮೇಲ್ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನೂ ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್ಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.