ಸಮಗ್ರ ನ್ಯೂಸ್: ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಇದೀಗ ಪ್ರಕರಣದ ಕುರಿತು ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ ನಡೆಸಿದೆ.
ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಿರುವ ಸಿಐಡಿ ಇನ್ನೊಂದು ವಾರದಲ್ಲಿ ಚಾರ್ಚ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಅಷ್ಟೆ ಅಲ್ಲದೆ ನೇಹಾ ತಂದೆ ನಿರಂಜನ ಫಯಾಜ್ ಬಿಟ್ಟು, ಇನ್ನು ಕೆಲವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿದೆ.
ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಮೇರೆಗೆ ಏ. 30ರ ವರೆಗೆ ಆರು ದಿನಗಳ ಕಾಲ ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ನಂತರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, 14 ದಿನಗಳ ಕಾಲ ಫಯಾಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.