Ad Widget .

ನನ್ನ ಜನ್ಮದಿನದಂದು ಯಾರು ನನ್ನ ಭೇಟಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಮೇ 15ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜನ್ಮದಿನ. ಆದರೆ ಅವರು ಜನ್ಮದಿನದಂದು ನಾನು ಅಲಭ್ಯ, ಇದ್ದ ಕಡೆಯಿಂದಲೇ ಹರಸಿ. ನನ್ನ ಭೇಟಿಗೆ ಬರಬೇಡಿ ಎಂದು ಡಿ.ಕೆ ಶಿವಕುಮಾರ್​ ಮನವಿ ಮಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಖಾಸಗಿ ಕಾರ್ಯಕ್ರಮ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ನಾನು ಯಾರಿಗೂ ಕೂಡ ಸಿಗುವುದಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ನನ್ನ ಭೇಟಿಗೆ ಪ್ರಯತ್ನಿಸುವುದು ಬೇಡ. ದಯವಿಟ್ಟು ಯಾರೂ ತಪ್ಪು ತಿಳಿಯಬಾರದೆಂದು ಮನವಿ ಮಾಡಿದ್ದಾರೆ.

Ad Widget . Ad Widget . Ad Widget .

ರಾಜ್ಯದಲ್ಲಿ ಮಳೆ-ಬೆಳೆ ಇಲ್ಲದೆ ಜನರು ಕಷ್ಟ ಪಡುತ್ತಿದ್ದಾರೆ. ಹಾಗಾಗಿ ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು. ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳದಂತೆ, ನನ್ನ ಜನ್ಮದಿನದಂದು ಕಟೌಟ್, ಪೋಸ್ಟರ್​ ಹಾಕುವುದಾಗಲಿ, ಜಾಹೀರಾತು ನೀಡುವುದಾಗಲಿ ಮಾಡಬೇಡಿ. ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು, ಅದುವೇ ನನಗೆ ಶ್ರೀರಕ್ಷೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *