ಸಮಗ್ರ ನ್ಯೂಸ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು ಆಕ್ರಮಿತ ಕಾಶ್ಮಿರದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ದ್ಯೋತಕ’ ಎಂದು ಕೆಲವು ಪಾಕಿಸ್ತಾನಿ ಅಧಿಕಾರಿಗಳೇ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸದ್ಯ ನಡೆಯುತ್ತಿರುವ ಬೆಳವಣಿಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ತಾನಾಗಿ ಭಾರತದ ಜೊತೆ ವಿಲೀನಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದೆ. ಪಿಒಕೆಯಲ್ಲಿ ಪಾಕಿಸ್ತಾನ ಸರ್ಕಾರ, ಸೇನೆ ಹಾಗೂ ಪೊಲೀಸರು ವಿರುದ್ಧ ಆರಂಭಗೊಂಡ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ. 144 ಸೆಕ್ಷನ್ ಜಾರಿ ಮಾಡಿದ್ದರೂ ಭಾರಿ ಸಂಖ್ಯೆಯಲ್ಲಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಾಕ್ ಸೇನೆ ಹಾಗೂ ಪೊಲೀಸರ ದಬ್ಬಾಳಿಕೆ, ದೌರ್ಜನ್ಯ, ಬೆಲೆ ಏರಿಕೆ, ವಿದ್ಯುತ್ ಕಡಿತ ಸೇರಿದಂತೆ ಹಲವು ವಿಚಾರ ಮುಂದಿಟ್ಟು ಪ್ರತಿಭಟನೆ ಆರಂಭಗೊಂಡು ಇದೀಗ ತಾರಕಕ್ಕೇರಿದೆ. ಈ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ಜೊತೆ ವಿಲೀನ ಘೋಷಣೆ ಕೂಗಿದ್ದಾರೆ. ಬ್ಯಾನರ್ ಹಿಡಿದ ಘಟನೆ ವರದಿಯಾಗಿದೆ.
ಕಳೆದೆರಡು ದಶಕಗಳಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ವಿರುದ್ಧವೂ ಹಲವು ಪ್ರತಿಭಟನೆಗಳು ನಡೆದಿದೆ. ಪಾಕಿಸ್ತಾನ ಹಾಗೂ ಚೀನಾ ಒಪ್ಪಂದ ಆಧಾರಿತ ಯೋಜನೆಗಳಿಗೆ ಹಲವು ಸ್ಥಳೀಯ ಸಂಘಟನೆಗಳು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದೆ. ಪಾಕಿಸ್ತಾನ ಸೇನೆ ನಡೆಸುತ್ತಿರುವ ದೌರ್ಜನ್ಯ, ಪಾಕಿಸ್ತಾನ ಸರ್ಕಾರದ ದುರಾಡಳಿತ ಕುರಿತು ಪ್ರತಿಭಟನೆಗಳಾಗಿದೆ. ಆದರೆ ಇದೇ ಮೊದಲ ಬಾರಿಗೆ ಪ್ರತಿಭಟನೆಯಲ್ಲಿ ಭಾರತದ ಜೊತೆ ವಿಲೀನದ ಮಾತುಗಳು ಕೇಳಿಬಂದಿದೆ. ಪಾಕಿಸ್ತಾನ ಇದೀಗ ಆಕ್ರಮಿತ ಕಾಶ್ಮೀರದ ಮೇಲಿಟ್ಟಿದ್ದ ಹಿಡಿತ ಸಡಿಲಗೊಳ್ಳುತ್ತಿದೆ.
ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಸೋಮವಾರ ಅಧ್ಯಕ್ಷರ ಭವನದಲ್ಲಿ ಪ್ರದೇಶದ ಪರಿಸ್ಥಿತಿ ಬಗ್ಗೆ ಚರ್ಚಿಸಲು ಸಂಬಂಧಿಸಿದಂತೆ ತುರ್ತು ಸಭೆಯನ್ನು ಕರೆದಿದ್ದಾರೆ. ಸಮಸ್ಯೆಪರಿಹರಿಸಲು ಪ್ರಸ್ತಾವನೆಗಳನ್ನು ತರಲು ಮಧ್ಯಸ್ಥಗಾರರಿಗೆ ಸೂಚಿಸಿದ್ದಾರೆ.