ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.
ಶಾಸಕರು ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳಿಂದ ಸಭೆಗೆ ತಡೆ ನೀಡಲಾಗಿದೆ.ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಅಧಿಕಾರಿಗಳು ಸೂಚನೆ ನೀಡಿದರು.
ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದು ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆಯ ವೇಳೆ ಶಾಸಕರು ಸಭೆಯನ್ನು ಕರೆದಿದ್ದು, ಜನರ ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಶಾಸಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪುತ್ತೂರು ನಗರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಛೇರಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಸರಕಾರಿ ಕಛೇರಿ ಬಳಕೆ ಮಾಡಿಕೊಳ್ಳಲಾಗಿದೆ. ಈ ವೇಳೆ ಕಛೇರಿಯಿಂದ ಶಾಸಕರನ್ನು ಮತ್ತು ಕಛೇರಿ ಸಿಬ್ಬಂದಿಗಳನ್ನು ಅಧಿಕಾರಿಗಳುಹೊರ ಕಳುಹಿಸಿದ ಘಟನೆ ನಡೆದಿದೆ.
ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡದಿಂದ ಶಾಸಕರಿಗೆ ಸೂಚನೆ ನೀಡಲಾಗಿದೆ, ಶಾಸಕರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ.