Ad Widget .

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್‌ : ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾರು ಚಾಲಕ ತೌಶೀಫ್ ಎಂಬಾತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ತೌಶೀಫ್ ಕಾರಿನಲ್ಲಿ ಒಬ್ಬನೇ ಇದ್ದು ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ.

Ad Widget . Ad Widget . Ad Widget .

ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ಮಾಡಿದ್ದಾರೆ‌.

ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಂತ ಪರಿಣಾಮ ಅಪಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ವಾಹನ ಸವಾರರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ

Leave a Comment

Your email address will not be published. Required fields are marked *