ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ.
ಮೃತನನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.