ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್

ಸಮಗ್ರ ನ್ಯೂಸ್: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ.

Ad Widget ... ..

ತಿಂಗಳುಗಳ ಬಳಿಕ ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಿದೆ. ಪರಿಣಾಮ ಮರ ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸಚಾರ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ ಮರಗಳ ತೆರವಿಗೆ ಮುಂದಾಗಿದ್ದಾರೆ. ಮತ್ತೊಂದೆಡೆ ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

Leave a Comment

Your email address will not be published. Required fields are marked *