ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಮತ್ತೊಮ್ಮೆ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ. ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಆರು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿದ್ದು, ನಂತರ ಅದು ನಕಲಿ ಬಾಂಬ್ ಬೆದರಿಕೆ ಕರೆ ಎಂದು ಖಚಿತವಾಗಿತ್ತು.

. Ad Widget . Ad Widget

ಇದೀಗ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್ ರವಾನಿಸಿದ್ದಾರೆ.

. Ad Widget . . Ad Widget . Ad Widget

ಈ ಹಿನ್ನೆಲೆಯಲ್ಲಿ ಪೊಲೀಸರು, ಸ್ಫೋಟಕ ದಳ ಹಾಗೂ ಶ್ವಾನ ದಳದಿಂದ ಶಾಲೆಯಲ್ಲಿ ತಪಾಸಣೆ ನಡೆಸಲಾಯಿತು. ಶಾಲಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ.

Leave a Comment

Your email address will not be published. Required fields are marked *