ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
ಅಫಿಡವಿಟ್ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.
ಇನ್ನೂ ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.