ಸಮಗ್ರ ನ್ಯೂಸ್ : ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.
ಬಿಜೆಪಿ ಟಿಕೆಟ್ ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್ ಸಿಕ್ಕಿದ್ದಕ್ಕೆ ಅಸಮಾಧಾನಗೊಂಡಿರುವ ಸಜ್ಜನ್ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೀಳಿಯಲು ನಿರ್ಧರಿಸಿದ್ದಾರೆ. ನಾಮಪತ್ರ ಸಲ್ಲಿಕೆ ಕೊನೆ ದಿನದಂದೇ ಅಮರನಾಥ ಪಾಟೀಲ್ ಬಿಜೆಪಿ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸುತ್ತಿದ್ದು, ಇದೇ ಸಮಯಕ್ಕೆ ಸಜ್ಜನ ಸಹ ನಾಮಪತ್ರ ಸಲ್ಲಿಸುತ್ತಿದ್ದಾರೆ.
ಟಿಕೆಟ್ ಸಿಗದಿದ್ದಕ್ಕೆ ಜಿ.ಪಂ ಮಾಜಿ ಉಪಾಧ್ಯಕ್ಷ, ಮುಖಂಡ ಸುರೇಶ ಸಜ್ಜನ್ ಬಂಡಾಯ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಮೇ. 16 ರಂದು ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಸಜ್ಜನ್ ನಾಮಪತ್ರ ಸಲ್ಲಿಸಲಿದ್ದಾರೆ.
ಚುನಾವಣೆಗೆ ಕಳೆದ ನಾಲ್ಕು ವರ್ಷಗಳಿಂದ ಸಿದ್ದತೆ ಮಾಡಿಕೊಳ್ಳ ಲಾಗಿದೆ. ತಮಗೆ ಟಕೆಟ್ ದೊರಕುವ ಬಗ್ಗೆ ದೃಢ ವಿಶ್ವಾಸ ಹೊಂದಲಾಗಿತ್ತು. ಆದರೆ ವರಿಷ್ಠರು ಮತ್ತೆ ಅಮರನಾಥ ಪಾಟೀಲ್ ಅವರಿಗೆ ಮತ್ತೆ ಮಣೆ ಹಾಕಿದ್ದರಿಂದ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೀಳಿಯಲಾಗುತ್ತಿದೆ ಎಂದು ಸಜ್ಜನ್ ತಿಳಿಸಿದ್ದಾರೆ.