ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ… ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್: ಚಾರ್ಲಿ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಟೈಮಲ್ಲಿ ತುಂಬಾ ಫೇಮಸ್ ಆದ ಮೂವಿ ಇದು. ಅದ್ರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಲೈವ್ ಬಂದು ಒಂದು ಸಂತಸದ ವಿಚಾರ ಹಂಚಿಕೊಂಡಿದ್ದಾರೆ ಅದೇನು ಅಂತೀರಾ ಇಲ್ಲಿದೆ ನೋಡಿ

Ad Widget ... ..

ಹೌದು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ರಕ್ಷಿತ್​ ಶೆಟ್ಟಿ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿಂದ ಅವರು ಬಹಳ ಖುಷಿಯಲ್ಲಿ ಲೈವ್​ ಬಂದು ಸಂತಸವನ್ನು ಹಂಚಿಕೊಂಡಿದ್ದಾರೆ.

Ad Widget

2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿ ಈ ಸಿನಿಮಾ ಮೆಚ್ಚುಗೆ ಗಳಿಸಿತ್ತು. ಚಾರ್ಲಿಯ ನಟನೆಗೆ ಶ್ವಾನಪ್ರಿಯರು ಮೆಚ್ಚುಗೆ ಸೂಚಿಸಿದ್ದರು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ. ಮೇ 9ರಂದು ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದೆ. ಹಾಗಾಗಿ ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ರಕ್ಷಿತ್​ ಶೆಟ್ಟಿ ಅವರು ಚಾರ್ಲಿ ಮತ್ತು ಅದರ ಮರಿಗಳನ್ನು ಅಭಿಮಾನಿಗಳಿಗೆ ತೋರಿಸಿದ್ದಾರೆ.

Leave a Comment

Your email address will not be published. Required fields are marked *