ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಮತ್ತು ಮಹಿಳಾ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ. ಈ ಕುರಿತಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ.
ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪದಡಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.