ಸಮಗ್ರ ನ್ಯೂಸ್: ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದ್ದು, ಲಾಲ್ ಬಾಗ್ ನಲ್ಲಿ ಮಾವಿನ ಮೇಳ ನಡೆಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ,
ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಈ ಮಾವಿನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.
ಇನ್ನು ಐಐಎಚ್‍ಆರ್, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ. ಈ ವರ್ಷದ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಇರಲಿವೆ.