ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನೀರಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. 2023-24 ಜಲವರ್ಷದ ಅಂತಿಮ ಸಭೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ, ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟಾದ ಪ್ರದೇಶದಲ್ಲಿ ನೈಸರ್ಗಿಕವಾಗಿ ಸಮುದ್ರ ಸೇರುವ ನೀರನ್ನು ಬಳಸಿಕೊಳ್ಳಿ ಎಂದು ತಮಿಳುನಾಡಿಗೆ ಸೂಚಿಸಲಾಗಿದೆ.