Ad Widget .

ಮುಂಬೈ : ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದ ನಿತಿನ್ ಗಡ್ಕರಿ

ಸಮಗ್ರ ನ್ಯೂಸ್ : ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಉತ್ತರಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅವರು ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ ಎಂದರು.

Ad Widget . Ad Widget . Ad Widget .

ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ಬಿಜೆಪಿ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದರು.

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಈ ಹಿಂದೆ ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು.

ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆ ಎಂದಿದ್ದರು. ಜತೆಗೆ ಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೋದಿ ಅವರನ್ನು ಪ್ರಶ್ನಿಸಿದ್ದರು.

ನೀವು ಮೋದಿ ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ? ಎಂದು ಕೇಳಿದ್ದರು.

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದಿದ್ದ ಖರ್ಗೆ, ಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದರು.

Leave a Comment

Your email address will not be published. Required fields are marked *