ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಖರ್ಂಡ್ ಹೈಕೋರ್ಟ್ 1000 ರೂ. ದಂಡ ವಿಧಿಸಿದೆ.
ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ತಾಪ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಇದನ್ನು ಕೆಳ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿತ್ತು. ಕಳೆದ ತಿಂಗಳು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು. ಚೈಬಾಸಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿತ್ತು. ಆ ಕಾಗ್ನಿಜೆನ್ಸ್ ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಪರವಾಗಿ ಜಾಖರ್ಂಡ್ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಇದೇ ಪ್ರಕರಣದ ವಿಚಾರಣೆ ಇಂದು ನ್ಯಾಯಮೂರ್ತಿ ಅನಿಲ್ ಕುಮಾರ್ ಚೌಧರಿ ಅವರ ಸಮ್ಮುಖದಲ್ಲಿ ನಡೆಯಿತು. ಆದರೆ, ರಾಹುಲ್ ಗಾಂಧಿ ಪರ ವಕೀಲರು ತಮ್ಮ ಪರ ವಾದ ಮಂಡಿಸಲು ಕಾಲಾವಕಾಶ ಕೋರಿದರು. ಇದಕ್ಕೆ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಬೇಸಿಗೆ ರಜೆಯ ನಂತರ ನಡೆಯಲಿದೆ ಎಂದು ಜಾಖರ್ಂಡ್ ಹೈಕೋರ್ಟ್ ವಕೀಲ ಧೀರಜ್ ಕುಮಾರ್ ಈ ಮಾಹಿತಿ ನೀಡಿದ್ದಾರೆ.
2018ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಚೈಬಾಸಾ ನಿವಾಸಿ ಪ್ರತಾಪ್ ಕಟಿಯಾರ್ ಎಂಬವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದರು.