ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ

ಸಮಗ್ರ ನ್ಯೂಸ್: ಮೇ 20 ರಂದು ಲೋಕಸಭೆಯ 5ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಶನಿವಾರಕ್ಕೆ ಅಂತ್ಯವಾಗಿದೆ.

Ad Widget ... ..

ಉತ್ತರ ಪ್ರದೇಶದ 14 ಕ್ಷೇತ್ರಗಳು, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಬಿಹಾರದ 5, ಒಡಿಶಾದ 5, ಜಾಖರ್ಂಡ್ 3 ಹಾಗೂ ಲಡಾಖ್ ಹಾಗೂ ಜಮ್ಮ ಮತ್ತು ಕಾಶ್ಮೀರದಲ್ಲಿ ತಲಾ ಒಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Ad Widget

ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಲಾಲು ಪ್ರಸಾದ್, ರಾಜ್‍ನಾಥ್ ಸಿಂಗ್, ಓಮರ್ ಅಬ್ದುಲ್ಲಾ, ಪಿಯೂಷ್ ಗೋಯಲ್, ರಾಜೀವ್ ಪ್ರತಾಪ್ ರೂಢಿ, ರೋಹಿಣಿ ಅಚಾರ್ಯ, ಚಿರಾಸ್ ಪಾಸ್ವಾನ್, ಸೇರಿದಂತೆ ಹಲವು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Leave a Comment

Your email address will not be published. Required fields are marked *