ಸಮಗ್ರ ನ್ಯೂಸ್: ನಿನ್ನೆ ಚೆನ್ನೈ ಮತ್ತು ಆರ್ಸಿಬಿ ಮ್ಯಾಚ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆರ್ಸಿಬಿ ಜಯಗಳಿಸಿದೆ. ಇನ್ನೂ ಈ ಪಂದ್ಯ ಜಿಯೋ ಸಿನಿಮಾದಲ್ಲಿ 50 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆಯೊಂದನ್ನು ಬರೆದಿದೆ. ಐಪಿಎಲ್(IPL 2024) ಇತಿಹಾಸದಲ್ಲೇ ಡಿಜಿಟಲ್ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ.
ನಿನ್ನೆ ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್ಗೆ 191 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಆದರೆ ಕೊನೆ ಕ್ಷಣದಲ್ಲಿ ವೀಕ್ಷಕರ ಸಂಖ್ಯೆ ಒಂದೇ ಕ್ಷಣ ಏರಿಕೆ ಕಂಡಿತು.