ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು, ಇದೇ 22ರವರೆಗೆ ಕರಾವಳಿಯುದ್ಧಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ.
ಇದೇ 20ರಂದು ಮತ್ತು ಇದೇ 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ. ವೇಗದಲ್ಲಿ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಳ ಸಮುದ್ರ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ ಮರಳುವಂತೆಯೂ ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.