ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ಇನ್ನೂ ನಿರ್ಧಾರ ಆಗದಿರುವ ಕಾರಣ, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಿದೆ.
ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ Sಂ-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.