ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

. Ad Widget . Ad Widget . Ad Widget .

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ. ಪಿಸ್ತೂಲ್, ಸಜೀವ ಮದ್ದುಗುಂಡುಗಳು, ಮೊಬೈಲ್ ಫೋನುಗಳು, ಹಾಗೂ ಕಪ್ಪು ಬಣ್ಣದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000 ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.

Leave a Comment

Your email address will not be published. Required fields are marked *