ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ರನ್ ಮೆಷಿನ್ ಖ್ಯಾತಿಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್‍ನಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಐಪಿಎಲ್ ಇತಿಹಾಸದಲ್ಲೇ 8000 ರನ್ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ad Widget ... ..

ರಾಜಸ್ಥಾನ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ರನ್ ಗಳಿಸಿದಾಗ ಕೊಹ್ಲಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಸಿಡಿಸಿ ಔಟಾದ ಕೊಹ್ಲಿ, ಈ ಬಾರಿ ಐಪಿಎಲ್‍ನ ರನ್ ಗಳಿಕೆಯನ್ನು 741ಕ್ಕೆ ಹೆಚ್ಚಿಸಿದರು. ಒಟ್ಟಾರೆ ಐಪಿಎಲ್‍ನಲ್ಲಿ ಅವರ ರನ್ ಸದ್ಯ 8004.

Ad Widget

2008ರ ಚೊಚ್ಚಲ ಆವೃತ್ತಿಯಿಂದಲೂ ಆರ್‍ಸಿಬಿಯನ್ನು ಪ್ರತಿನಿಧಿಸುತ್ತಿರುವ ವಿರಾಟ್ ಈ ವರೆಗೂ 252 ಪಂದ್ಯಗಳನ್ನು ಆಡಿದ್ದಾರೆ. 38.66ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಅವರ ಸ್ಟ್ರೈಕ್‍ರೇಟ್ 131.97. ಅವರು ಐಪಿಎಲ್‍ನಲ್ಲಿ 8 ಶತಕ, 55 ಅರ್ಧಶತಕ ಸಿಡಿಸಿದ್ದಾರೆ

Leave a Comment

Your email address will not be published. Required fields are marked *