ಕೇರಳದಲ್ಲಿ ಕೊರೊನಾ ಸೋಂಕು ಏರಿಕೆ: ಇಂದಿನಿಂದ ಕರ್ನಾಟಕದಿಂದ ಸರ್ಕಾರಿ, ಖಾಸಗಿ ಬಸ್ ಸಂಚಾರ ಸ್ಥಗಿತ

Ad Widget ... ..

ಮಂಗಳೂರು: ನೆರೆಯ ರಾಜ್ಯವಾದ ಕೆರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಇಂದಿನಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.

Ad Widget

ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಅವರು ಹೇಳಿದರು.

ಅದಲ್ಲದೆ ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು, ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು, ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Leave a Comment

Your email address will not be published. Required fields are marked *