ಸಮಗ್ರ ನ್ಯೂಸ್: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A ಹಾಗೂ 149ರಡಿ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿಯ ಆಳ್ವಾನ್ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್ನಲ್ಲಿ ನಿನ್ನೆ ಸಂಜೆ 4.30ಕ್ಕೆ ಮಕ್ಕಳು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್ಲು ತೂರಾಟ ಮಾಡಿತ್ತು. ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕಲ್ಲು ತೂರದಂತೆ ಆಳ್ವಾನ್ ಗಲ್ಲಿ ನಿವಾಸಿಗಳು ಎಚ್ಚರಿಕೆ ನೀಡಿದ್ದರು. ಈ ಸಂದರ್ಭದಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಘಟನಾ ಸ್ಥಳಕ್ಕೆ ಪೊಲೀಸ್ ಕಾನ್ಸ್ಟೇಬಲ್ ಆಗಮಿಸಿದರು. ಅವರಿಗೂ ಗಲಾಟೆಯಲ್ಲಿ ಗಾಯಗಳಾಗಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೋಲಿಸರ ನಿಯೋಜನೆ, 3 ಕೆಎಸ್ಆರ್ಪಿ, 3 CPI ನಿಯೋಜನೆ ಮಾಡಲಾಗಿದೆ.