ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿದ್ದ ವೇಳೆ ಜೈ ಶ್ರೀ ರಾಮ್ ಹಾಗೂ ಜೈ ಮೋದಿ ಘೋಷಣೆ ಕೇಳಿಬಂದಿದೆ.
ಪಂಜೆ, ಶಲ್ಯ ತೊಟ್ಟು, ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಈ ವೇಳೆ ರಾಜ್ಯಸಭಾ ಸದಸ್ಯರೂ ಆಗಿರುವ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಮೋದಿ ಪರ ಘೋಷಣೆ ಮೊಳಗಿಸಿದರು.
ಸಿಎಂ ಹಾಗೂ ಡಿಸಿಎಂ ಕಾಣುತ್ತಿದ್ದಂತೆ ಸರತಿ ಸಾಲಿನಲ್ಲಿ ನಿಂತಿದ್ದ ಕೆಲ ಭಕ್ತರು ಮೋದಿ ಮೋದಿ ಅಂತ ಕೂಗಿಕೊಂಡರು. ಮೋದಿ ಕಿ ಜೈ, ಜೈ ಶ್ರೀರಾಮ್ ಅಂತ ಕೂಗಿದ್ರು. ಅಲ್ಲದೇ ಅಬ್ ಕಿ ಬಾರ್ ಮೋದಿ ಸರ್ಕಾರ್ ಅಂತ ಘೋಷಣೆ ಕೂಗಿದರು.
ಈ ವೇಳೆ ಸಿಎಂ, ಮತ್ತು ಡಿಸಿಎಂ, ನಮ್ಮ ಶಕ್ತಿ ಯೋಜನೆಯಿಂದ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ರಾಜ್ಯಾದ್ಯಂತ ಹೆಚ್ಚಿನ ಭಕ್ತಾಧಿಗಳು ಬರುವಂತಾಗಿದೆ. ಬೆಳಗಾವಿ, ಬೀದರ್, ಹುಬ್ಬಳ್ಳಿ ಧಾರವಾಡ, ಗುಲ್ಬಾರ್ಗದಿಂದ ಬಂದು ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ. ಈ ವಿಚಾರವನ್ನು ಡಾ.ವೀರೇಂದ್ರ ಹೆಗಡೆಯವರು ನಮ್ಮ ಗಮನಕ್ಕೆ ತಂದಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಿದ್ದಾರೆ. ಎಲ್ಲರೂ ಶಕ್ತಿ ಯೋಜನೆ ಸದುಪಯೋಗ ಪಡೆಯುತ್ತಿದ್ದಾರೆ. ಕ್ಷೇತ್ರಕ್ಕೆ ಒಳ್ಳೆದಾಗುತ್ತಿದೆ ಎಂದರು.