ಮೀನು, ಚಿಕನ್, ಮಟನ್‍ಗಿಂತ ಜಾಸ್ತಿ ಗೋಮಾಂಸವನ್ನೇ ತಿನ್ನಿ: ಬಿಜೆಪಿ ಸಚಿವ

Ad Widget ... ..

ಶಿಲ್ಲಾಂಗ್: ಮೀನು, ಚಿಕನ್, ಮಟನ್‍ಗಳಿಗಿಂತ ಜಾಸ್ತಿ ಗೋಮಾಂಸವನ್ನು ತಿನ್ನಿ ಎಂದು ರಾಜ್ಯದ ಜನರಿಗೆ ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲ್ಲೈ ಪ್ರೋತ್ಸಾಹಿಸಿದ್ದಾರೆ.

Ad Widget

ಕಳೆದವಾರವಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಬೆನ್ನಲೇ ಶುಲ್ಲೈ, ಇದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಪ್ರತಿಯೊಬ್ಬರಿಗೂ ಬೇಕಾದನ್ನು ತಿನ್ನಲ್ಲು ಸ್ವಾತಂತ್ರ್ಯವಿದೆ. ನಾನಂತೂ ಜನರಿಗೆ ಚಿಕನ್, ಮಟನ್, ಮೀನಿಗಿಂತಲೂ ಜಾಸ್ತಿ ಗೋಮಾಂಸ ತಿನ್ನಿ ಎಂದೇ ಪ್ರೋತ್ಸಾಹಿಸುತ್ತೇನೆ. ಬಿಜೆಪಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುತ್ತದೆಂಬ ಗ್ರಹಿಕೆ ತುಂಬ ಜನರಿಗೆ ಇದೆ. ಗೋಮಾಂಸ ತಿನ್ನಲು ಹೆಚ್ಚೆಚ್ಚು ಪ್ರೋತ್ಸಾಹ ನೀಡುವ ಮೂಲಕ ಅನಿಸಿಕೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಮಾಧ್ಯಮದವರಿಗೆ ಹೇಳಿಕೆ ನೀಡಿದ್ದಾರೆ.

ನೆರೆ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧಕ್ಕೆ ಸಂಬಂಧಪಟ್ಟಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಆದರೆ ಈ ಕಾಯ್ದೆಯಿಂದ ಮೇಘಾಲಯಕ್ಕೆ ಜಾನುವಾರುಗಳ ಸಾಗಣೆ ಮಾಡುವುದರ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಳಿ ಮಾತನಾಡುತ್ತೇನೆ ಎಂದು ಮೇಘಾಲಯ ಸಚಿವ ಶುಲ್ಲೈ ತಿಳಿಸಿದ್ದಾರೆ.

ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲ್ಲೈ ಇಂಥದ್ದೊಂದು ಕರೆ ಕೊಟ್ಟು ಬಹುದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ಹಾಗೂ ಆರ್‍ಎಸ್‍ಎಸ್‍ಗಳು ಗೋಹತ್ಯೆ, ಗೋಮಾಂಸ ಸೇವನೆಯನ್ನು ಕಟುವಾಗಿ ವಿರೋಧಿಸುತ್ತವೆ. ಹೀಗಿರುವಾಗ ಬಿಜೆಪಿಯದ್ದೇ ಸಚಿವರೊಬ್ಬರು ಇಂಥ ಹೇಳಿಕೆ ನೀಡಿರುವುದು ಎಷ್ಟು ಸರಿ ಎಂದು ಜನರೂ ಪ್ರಶ್ನಿಸುತ್ತಿದ್ದಾರೆ.

Leave a Comment

Your email address will not be published. Required fields are marked *