ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ತಿಳಿಯುತ್ತಿದ್ದಂತೆ ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಹೇಳಿದರು. ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ. ನಾನು ಮುಂದೆ ಯಾವುದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಅಧ್ಯಕ್ಷ ಸ್ಥಾನ ಸಿಕ್ಕರೆ ಪಕ್ಷಕ್ಕಾಗಿ ತನು, ಮನ ಅರ್ಪಿಸುತ್ತೇನೆ ಎಂದು ಹೇಳಿದರು.
ಇನ್ನೂ ಸರ್ಕಾರಕ್ಕೆ ಒಂದು ವರ್ಷ ಪೂರ್ಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರು ಇರ್ತಾರೆ ಎಂದು ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ರು. ಚುನಾವಣೆ ಫಲಿತಾಂಶ ಬರಲಿ. ಆಮೇಲೆ ಪೊಲರೈಸೇಷನ್ ಆಗಬಹುದು. ಅದು ಇಲ್ಲಷ್ಟೇ ಅಲ್ಲ ಎಲ್ಲಾ ಕಡೆಯೂ ಆಗಬಹುದು. ನನ್ನನ್ನ ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಮಂತ್ರಿ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ. ನನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದು ತಿಳಿಸಿದರು