ಸಮಗ್ರ ನ್ಯೂಸ್: ನೂರಾರು ಮಹಿಳೆಯರೊಂದಿಗಿನ ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಕೊನೆಗೂ ಇಬ್ಬರು ಪ್ರಮುಖ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ನವೀನ್ ಗೌಡ ಹಾಗು ಚೇತನ್ ಎಂಬ ಇಬ್ಬರನ್ನಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಇಬ್ಬರೂ ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪ ಹೊತ್ತುಕೊಂಡಿರುವ ಈ ಇಬ್ಬರು ಆರೋಪಿಗಳು ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್ ಕಡೆ ಬಂದಿದ್ದ ವೇಳೆಯೇ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈತನ್ಮಧ್ಯೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತ ಮಹಿಳೆಯನ್ನು ಅಪಹರಣಗೈದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಅರ್ಜಿದಾರ ಪರ ವಕೀಲರು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಅರ್ಜಿದಾರರಿಗೆ ಬಂಧನ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಜ್ವಲ್ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್‌ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ತಿಳಿಸಿದ್ದಾರೆ.