Ad Widget .

‘ತುಳುನಾಡು ಕರುನಾಡಲ್ಲೇ ಇದೆ, ನಮ್ಮನ್ನು ಹೊರಗಿನವರಂತೆ ಕಾಣಬೇಡಿ’| ಮಂಗಳೂರಿನಲ್ಲಿ ಕಿಚ್ಚ ಸುದೀಪ್ ಹೇಳಿಕೆ

ಸಮಗ್ರ ನ್ಯೂಸ್: ‘ಎಲ್ಲರಿಗೂ ನಮಸ್ಕಾರ. ವೇದಿಕೆ ಮೇಲಿದ್ದವರು ನಮ್ಮ ತುಳುನಾಡಿಗೆ ನಮ್ಮ ತುಳುನಾಡಿಗೆ ಎಂದು ನಮ್ಮನ್ನು ಹೊರಗಿನವರನ್ನಾಗಿ ಮಾಡುತ್ತಿದ್ದಾರೆ. ತುಳುನಾಡು ಕರ್ನಾಕಟದಲ್ಲೇ ಇದೆ’ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅವರು ಮಂಗಳೂರಿನಲ್ಲಿ ‘ಯಕ್ಷ ಧ್ರುವ ಪಟ್ಲ ಫೌಂಡೇಶನ್​’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

Ad Widget . Ad Widget . Ad Widget .

‘ಕರ್ನಾಟಕ ನಮ್ಮ ಹೃದಯದಲ್ಲಿದೆ. ನಾವು ಅರ್ಧ ಈಕಡೆಯವರು ಎಂದು ನಿರೂಪಕರು ಹೇಳಿದರು. ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ ಬಗ್ಗೆ ಗೊತ್ತಿರೋದು ಎಂದರೆ ಅವರು ಸ್ವಾಭಿಮಾನಿಗಳು. ಬಹಳ ಸುಲಭವಾಗಿ ಯಾರನ್ನೂ ಇಷ್ಟಪಡಲ್ಲ. ಅಂಥಹುದರಲ್ಲಿ ಮನಸ್ಸಲ್ಲಿ ನನಗೆ ಸಣ್ಣ ಜಾಗ ಕೊಟ್ಟಿದ್ದೀರಿ. ಅದು ಪೀಠಕ್ಕಿಂತ ದೊಡ್ಡದು. ನಿಮ್ಮ ಗೌರವ ಸ್ವೀಕರಿಸಿಲ್ಲ ಎಂದುಕೊಳ್ಳಬೇಡಿ. ಅದನ್ನು ಸ್ವೀಕರಿಸಿದ್ರೆ ನಾನು ಅದಕ್ಕಾಗಿಯೇ ಬಂದೆ ಎಂದುಕೊಳ್ಳುತ್ತಾರೆ. ನಾನು ಬಂದಿದ್ದು ನನ್ನ ಸ್ನೇಹಿತರಿಗೆ’ ಎಂದರು ಸುದೀಪ್.

‘ನನ್ನ ತಾಯಿ ತುಳು ಚೆನ್ನಾಗಿ ಮಾತಾಡ್ತಾರೆ. ನನಗೆ ಜಾಸ್ತಿ ತುಳು ಬರಲ್ಲ. ಕನ್ನಡ ಚಿತ್ರರಂಗಕ್ಕೆ ನಿಮ್ಮವರು ತುಂಬಾ ಜನ ಬಂದಿದ್ದಾರೆ. ಇದರಿಂದ ಕನ್ನಡ ಯಾವುದು, ತುಳು ಯಾವುದು ಅನ್ನೋದು ತಿಳಿಯುತ್ತಿಲ್ಲ’ ಎಂದು ಹಾಸ್ಯ ಮಾಡಿದರು. ತುಳು ಚಿತ್ರರಂಗದಿಂದ ಕನ್ನಡ ಚಿತ್ರರಂಗಕ್ಕೆ ಬಂದು ಉತ್ತಮ ಸಿನಿಮಾ ನೀಡುತ್ತಿರುವವರ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದರು.

Leave a Comment

Your email address will not be published. Required fields are marked *